ರಂಗಸ್ಥಳದಲ್ಲೇ ಪಯಣ ಮುಗಿಸಿದ ಕಲಾವಿದ: ಗುರುವಪ್ಪ ಬಾಯಾರು ಹೃದಯಾಘಾತದಿಂದ ನಿಧನ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ಡಿ.22 ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ರಂಗಸ್ಥಳದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ಇಹಲೋಕದ ಪಯಣ ಮುಗಿಸಿದ್ದಾರೆ. ಸರಸ್ವತೀ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟದ ತ್ರಿಜನ್ಮ ಮೋಕ್ಷ ಪ್ರಸಂಗ ನಡೆಯುತಿತ್ತು. ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ಆ ಸಂದರ್ಭದಲ್ಲಿ ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ಅವರು ರಂಗಸ್ಥಳದಿಂದ […]