ದೇಶದ ಹೆಗ್ಗುರುತಾದ ದ್ವಾರಕಾ ಎಕ್ಸ್‌ಪ್ರೆಸ್‌ವೇಯ ಹರಿಯಾಣ ವಿಭಾಗವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುಗ್ರಾಮ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 1 ಲಕ್ಷ ಕೋಟಿ ರೂ. ಮೊತ್ತದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಧಿಕೃತ ಹೇಳಿಕೆಯ ಪ್ರಕಾರ, ಪ್ರಧಾನ ಮಂತ್ರಿ ಇಂದು ದ್ವಾರಕಾ ಎಕ್ಸ್‌ಪ್ರೆಸ್‌ವೇಯ (Dwarka Expressway) ಹರಿಯಾಣ ವಿಭಾಗವನ್ನು ಉದ್ಘಾಟಿಸಲಿದ್ದಾರೆ. ಇದು ಸಂಚಾರ ಹರಿವನ್ನು ಸುಧಾರಿಸಲು ಮತ್ತು ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ದೆಹಲಿ ಮತ್ತು ಗುರುಗ್ರಾಮ್ ನಡುವಿನ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಎಂಟು ಪಥಗಳ ದ್ವಾರಕಾ […]