ಜ್ಞಾನವಾಪಿ ಪ್ರಕರಣ: ‘ಶಿವಲಿಂಗ’ದಾಕೃತಿ ಸ್ಥಳದ ಸ್ವಚ್ಛತೆಗೆ ‘ಸುಪ್ರೀಂ’ ಆದೇಶ

ನವದೆಹಲಿ: ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ಅವರಣದಲ್ಲಿರುವ ಶಿವಲಿಂಗದಾಕೃತಿ ಸ್ಥಳದ ಸಂಪೂರ್ಣ ಸ್ವಚ್ಛತೆಗೆ ‘ಸುಪ್ರೀಂ ಕೋರ್ಟ್’ ಮಂಗಳವಾರ ಆದೇಶ ನೀಡಿದೆ. ವಾರಣಾಸಿಯ ಜ್ಞಾನವಾಪಿ ‘ವಜುಖಾನಾ’ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮಸೀದಿ ಸಂಕೀರ್ಣದ ವಜುಖಾನಾದ ಸಂಪೂರ್ಣ ಪ್ರದೇಶವನ್ನು ಸ್ವಚ್ಛಗೊಳಿಸಲು ಸುಪ್ರೀಂ ಕೋರ್ಟ್ ಆದೇಶ ಹೇಳಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ಜೆ.ಬಿ. ಪರ್ದೀವಾಲಾ ಹಾಗೂ ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ. ವಾರಣಾಸಿ […]

ಬಾಬರಿ ನಂತರ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ಮುಸ್ಲಿಮರು ತಯಾರಿಲ್ಲ: ಅಸಾದುದ್ದೀನ್ ಓವೈಸಿ

ವಾರಣಾಸಿ: ಬಾಬರಿ ಮಸೀದಿಯ ನಂತರ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ಮುಸ್ಲಿಮರು ತಯಾರಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ ಹೇಳಿದ್ದಾರೆ. ನ್ಯಾಯಾಲಯದ ಆದೇಶದನ್ವಯ ವಾರಣಾಸಿಯ ಜ್ಞಾನವಾಪಿ ಸಂಕೀರ್ಣದ ಸಮೀಕ್ಷೆಯ ಸಮಯದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಲಾಗಿರುವ ಬಳಿಕ ಅವರು ಪ್ರತಿಕ್ರಿಯಿಸಿದ್ದಾರೆ. ಬಾಬರಿ ಮಸೀದಿ ಧ್ವಂಸ ಮತ್ತು 1949 ರಲ್ಲಿ ಹಿಂದೂ ದೇವತೆಗಳ ವಿಗ್ರಹಗಳು ಕಾಣಿಸಿಕೊಂಡಾಗ ನಡೆದ ಘಟನೆಯನ್ನು ಉಲ್ಲೇಖಿಸಿದ ಓವೈಸಿ, ವಾರಣಾಸಿಯಲ್ಲಿ ಅದನ್ನು ಪುನರಾವರ್ತಿಸಲು ಬಿಡುವುದಿಲ್ಲ ಎಂದು ಮುಸ್ಲಿಮರು ಪ್ರತಿಜ್ಞೆ ಮಾಡಬೇಕೆಂದಿದ್ದಾರೆ. ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ […]

ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆ? ಮುಗಿಯುವುದೆ ಶತಮಾನಗಳಿಂದ ಕಾಯುತ್ತಿರುವ ನಂದಿಯ ಪ್ರತೀಕ್ಷೆ?

ಉತ್ತರಪ್ರದೇಶ: ವಾರಣಾಸಿಯ ಜ್ಞಾನವಾಪಿ ಮಸೀದಿಯ ವಿಡಿಯೋ ಸಮೀಕ್ಷೆಯ ಕೊನೆಯ ದಿನ, ಬಾವಿಯೊಳಗೆ ಶಿವಲಿಂಗ ಕಂಡುಬಂದಿದೆ ಎಂದು ವಕೀಲ ವಿಷ್ಣು ಜೈನ್ ಪ್ರತಿಪಾದಿಸಿದ್ದಾರೆ. ಶಿವಲಿಂಗವು 12 ಅಡಿ 8 ಇಂಚು ವ್ಯಾಸವನ್ನು ಹೊಂದಿದೆ ಎನ್ನಲಾಗಿದೆ. ಆಜ್ ತಕ್/ಇಂಡಿಯಾ ಟುಡೇ ಟಿವಿ ಜೊತೆ ಫೋನ್ ಮೂಲಕ ಶಿವಲಿಂಗದ ಬಗ್ಗೆ ಮಾತನಾಡಿದ ಜೈನ್, ಅದರ ರಕ್ಷಣೆಗಾಗಿ ನಾಗರಿಕ ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದ್ದಾರೆ. ಇದಾದ ಕೆಲವೇ ಗಂಟೆಗಲ್ಲಿ ನಾಗರಿಕ ನ್ಯಾಯಾಲಯವು ವಿವಾದಿತ ಪ್ರದೇಶವನ್ನು ಸೀಲ್ ಮಾಡಿ ಜನರ ಪ್ರವೇಶವನ್ನು ನಿಷೇಧಿಸಲು ಆದೇಶ […]