ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಸಂವಿಧಾನದ ಪೀಠಿಕೆ ಓದಲು ಆದೇಶ: ಡಾ. ಎಚ್‌ಸಿ ಮಹದೇವಪ್ಪ
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳೆಲ್ಲರೂ ಸಂವಿಧಾನದ ಪೀಠಿಕೆ ಓದುವಂತೆ ಪೂರಕ ಆದೇಶ ನೀಡಲು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಗುರುವಾರದಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನದಲ್ಲಿ ಸೂಚಿತ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಓದಿಸುವುದಕ್ಕೆ ಪೂರಕ ಆದೇಶ ಹೊರಡಿಸಲು […]