ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನ
ಉಡುಪಿ: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್, ಟೆಕ್ನಿಕಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್, ಬೆಂಗಳೂರು ತರಬೇತಿ ಸಂಸ್ಥೆಯಲ್ಲಿ ಅಪ್ರೆಂಟಿಸ್‌ಶಿಪ್ ಕಾಯ್ದೆ ಅಡಿಯಲ್ಲಿ ಸಿ.ಎನ್.ಸಿ ಪ್ರೋಗ್ರಾಮರ್ ಕಮ್ ಅಪರೇಟರ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಟ್ರೇಡ್‌ನಲ್ಲಿ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು ಶೇ.60 ಮತ್ತು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳು ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು, ವಿವರಗಳನ್ನು ಭರ್ತಿಮಾಡಿ ಅರ್ಜಿಯೊಂದಿಗೆಎಸ್.ಎಸ್.ಎಲ್.ಸಿ ಪ್ರಮಾಣಪತ್ರ, […]