ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಬುಧವಾರ ಮಣಿಪಾಲ ವಾರ್ಡಿನಲ್ಲಿಅರಶಿನ ಕುಂಕುಮ ಕಾರ್ಯಕ್ರಮ ನಡೆಯಿತು. ಶಿಲ್ಪಾ ಆರ್ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.