ಹಮೀದ್ ಅನ್ಸಾರಿ ಉಪರಾಷ್ಟ್ರಪತಿಯಾಗಿದ್ದಾಗ ಭಾರತಕ್ಕೆ ಭೇಟಿ ನೀಡಿದ್ದೆ: ಪಾಕ್ ಪತ್ರಕರ್ತನ ಹೇಳಿಕೆಯಿಂದ ದೇಶದಲ್ಲಿ ಸಂಚಲನ

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ತನ್ನನ್ನು ಭಾರತಕ್ಕೆ ಆಹ್ವಾನಿಸುತ್ತಿದ್ದರು ಎಂಬ ಪಾಕ್ ಪತ್ರಕರ್ತನ ಹೇಳಿಕೆ ದೇಶದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆಯಿಂದ ದೇಶದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಹಮೀದ್ ಅನ್ಸಾರಿ ಉಪರಾಷ್ಟ್ರಪತಿಯಾಗಿದ್ದಾಗ ಭಾರತಕ್ಕೆ ಭೇಟಿ ನೀಡಿದ್ದೆ ಮತ್ತು ಆ ಸಮಯದಲ್ಲಿ ಪಾಕಿಸ್ತಾನದ ಐಎಸ್‌ಐ ಜೊತೆ ಭಾರತಕ್ಕೆ ಸಂಬಂಧಿಸಿದ ಹಲವು ಗೌಪ್ಯ ಮಾಹಿತಿಗಳನ್ನು ಹಂಚಿಕೊಂಡಿದ್ದಾಗಿ ಪಾಕಿಸ್ತಾನಿ ಪತ್ರಕರ್ತರೊಬ್ಬರ ಸಂದರ್ಶನದಿಂದ ಈ ವಿವಾದ ಹುಟ್ಟಿಕೊಂಡಿದೆ. “ಭಾರತದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು […]