ಬೈಂದೂರು: ಕದಿಕೆ ಟ್ರಸ್ಟ್ ನಿಂದ ಕೈಮಗ್ಗ ನೇಕಾರಿಕೆ ತರಬೇತಿ ಕಾರ್ಯಕ್ರಮ

ಬೈಂದೂರು: ಅಳಿವಿನಂಚಿನಲ್ಲಿದ್ದ ಉಡುಪಿ ಸೀರೆ ನೇಯ್ಗೆ ಪುನಶ್ಚೇತನಗೊಳಿಸಿದ ಕದಿಕೆ ಟ್ರಸ್ಟ್ ನಿಂದ ಬೈಂದೂರು ತಾಲೂಕಿನ ಏಳಜಿತ್ ನ ಸರೋಜ ಅಣ್ಣಪ್ಪ ಅವರ ಮಗ್ಗದ ಮನೆಯಲ್ಲಿ ಅಕ್ಟೋಬರ್ 2, ಗಾಂಧಿ ಜಯಂತಿಯಂದು ಹೊಸ ಕೈಮಗ್ಗ ನೇಕಾರಿಕೆ ತರಬೇತಿ ಆರಂಭಿಸಲಾಗಿದೆ. ಸರಿಯಾದ ಸಂಪರ್ಕ ವ್ಯವಸ್ಥೆ ಇಲ್ಲದ, ಬೇರೆ ಉದ್ಯೋಗ ಅವಕಾಶವೂ ಇಲ್ಲದ ಒಳ ಪ್ರದೇಶ ವಾದ ಹೊಸೆರಿಯ ಏಳು ಯುವಜನರು ಈ ಯೋಜನೆಯಲ್ಲಿ ತರಬೇತಿ ಪಡೆಯಲಿದ್ದಾರೆ. ಆರು ತಿಂಗಳ ತರಬೇತಿಯಲ್ಲಿ ಶಿಬಿರಾರ್ಥಿಗಳಿಗೆ ಕದಿಕೆ ಟ್ರಸ್ಟ್ ವತಿಯಿಂದ ಸ್ಟೈಪೆಂಡ್ ಜೊತೆಗೆ ತಿರುವಂನಂತಪುರದ ಪ್ರಖ್ಯಾತ […]