ಹಾನಗಲ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ ಭರ್ಜರಿ ಗೆಲುವು; ಸಿಎಂ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಭಾರೀ ಮುಖಭಂಗ

ಹಾನಗಲ್: ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಹಾನಗಲ್ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಭರ್ಜರಿ ಗೆಲುವು ದಾಖಲಿಸಿದ್ದಾರೆ. 7598 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಸಿಎಂ ತವರು ಜಿಲ್ಲೆ ಹಾನಗಲ್ ಕ್ಷೇತ್ರದಲ್ಲಿ ಗೆದ್ದೇ ತೀರುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ. 19 ಸುತ್ತಿನ ಮತ ಎಣಿಕೆಯ ಬಳಿಕ ಕಾಂಗ್ರೆಸ್ ನ ಶ್ರೀನಿವಾಸ ಮಾನೆ 87,113 ಮತಗಳನ್ನು ಪಡೆದರೆ, ಬಿಜೆಪಿಯ ಅಭ್ಯರ್ಥಿಶಿವರಾಜ ಸಜ್ಜನರ 79,515 ಮತಗಳನ್ನಷ್ಟೇ […]