ಸಾಲಿಗ್ರಾಮ: ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರಕ್ಕೆ 50ರ ಸಂಭ್ರಮ; ‘ಯಕ್ಷ ಸಪ್ತೋತ್ಸವ’ ಕಾರ್ಯಕ್ರಮ
ಸಾಲಿಗ್ರಾಮ: ಯಕ್ಷಗಾನದಂತಹ ಕಲಾಪ್ರಕಾರದ ಉಳಿವು ಹಾಗೂ ಬೆಳವಣಿಗೆ ದೃಷ್ಟಿಯಿಂದ ಮಕ್ಕಳನ್ನು ಈ ಕಲೆಯಲ್ಲಿ ತೊಡಗಿಸಿಕೊಂಡು ಮುನ್ನಡೆಯುವುದು ಅತೀ ಆವಶ್ಯಕವಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮಂಗಳವಾರ ಗುಂಡ್ಮಿ ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಸಂಸ್ಥೆಯ ಐವತ್ತರ ಸಂಭ್ರಮಾಚರಣೆ ಪ್ರಯುಕ್ತ ಹಮ್ಮಿಕೊಂಡ ‘ಯಕ್ಷ ಸಪ್ತೋತ್ಸವ’ ಕಾರ್ಯಕ್ರಮದಲ್ಲಿ ಮೂರನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೃತ್ಯ, ಹಾಡುಗಾರಿಕೆ, ಅಭಿನಯ, ಮಾತು, ವೇಷಭೂಷಣ ಮೊದಲಾದ ಕಲೆಯಿಂದ […]