ಸೌದಿ ದೊರೆಯ ವಿರುದ್ಧ ಫೋಸ್ಟ್ ಪ್ರಕರಣ: ಎರಡು ವರ್ಷದ ಬಳಿಕ ತಾಯ್ನಾಡಿಗೆ ಮರಳುತ್ತಿರುವ ಕುಂದಾಪುರದ ಹರೀಶ್ ಬಂಗೇರ.!
ಉಡುಪಿ: ಸೌದಿ ಅರೇಬಿಯಾದ ದೊರೆಯ ವಿರುದ್ಧ ಪೋಸ್ಟ್ ಮಾಡಲಾಗಿದೆ ಎಂಬ ಆರೋಪದಡಿ ಸೌದಿ ಪೊಲೀಸರಿಂದ ಬಂಧಿತನಾಗಿರುವ ಕುಂದಾಪುರದ ಬೀಜಾಡಿಯ ಹರೀಶ್ ಬಂಗೇರ ಅವರು ಇದೇ ಆಗಸ್ಟ್ 18 ರಂದು ಬೆಂಗಳೂರು ತಲುಪಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಹರೀಶ್ ಬಂಗೇರ ತಾಯ್ನಾಡಿಗೆ ಮರಳಲು ಬೇಕಾದ ಎಲ್ಲ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಆಗಸ್ಟ್ 17ರಂದು ಸೌದಿ ಅರೇಬಿಯಾದ ದಮಾಮ್ ವಿಮಾನ ನಿಲ್ದಾಣದಿಂದ ದೋಹಾಗೆ ಹೋಗಿ ದೋಹಾ ಮೂಲಕ ಆಗಸ್ಟ್ 18ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ […]