ಶಾಸಕ ಹರೀಶ್ ಪೂಂಜಾ ವಿರುದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಸಂಬಂಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧದ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಜೆಪಿ ಶಾಸಕ ಹರೀಶ್​ ಪೂಂಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ […]

ಪುತ್ತೂರು ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣ: ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ ಶಾಸಕ ಹರೀಶ್ ಪೂಂಜಾ

ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಪೊಲೀಸರ ಈ ಅಮಾನವೀಯ ಕೃತ್ಯವನ್ನು ಖಂಡಿಸಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮನಸ್ಥಿತಿ ಮತ್ತು ವರ್ತನೆಯ ದರ್ಶನವಾಗುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ ಎಂದರು. ಈ ಬಗ್ಗೆ ದ.ಕ. ಜಿಲ್ಲಾ […]

ಬೆಳ್ತಂಗಡಿ: ಮತಚಲಾಯಿಸಿದ ಹರೀಶ್ ಪೂಂಜಾ

ಬೆಳ್ತಂಗಡಿ: ಇಲ್ಲಿನ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.

ಬೆಳ್ತಂಗಡಿ: ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್‌ ನಾಯಕರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷ ಜಯಂತ್‌ ಕೋಟ್ಯಾನ್‌ ಅವರ ಸಮ್ಮುಖದಲ್ಲಿ ಮೇ.5 ರಂದು ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್‌ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು. ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಸೆಬಾಸ್ಟಿನ್ ಮಿತ್ತಬಾಗಿಲು, ಬಾಲಕೃಷ್ಣ ಗೌಡ ಮಲವಂತಿಗೆ, ಪೂವಪ್ಪ ಪೂಜಾರಿ ಮಲವಂತಿಗೆ, ವನಿತಾ ಕಡಿರುದ್ಯಾವರ, ಬಾಲಕೃಷ್ಣ ಗೌಡ ಉದ್ದಾರೆ ಅವರನ್ನು ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಹರೀಶ್ ಪೂಂಜ ಅವರು ಬಿಜೆಪಿಗೆ ಬರಮಾಡಿಕೊಂಡರು.

ಇಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರ್ಮಾ ಅವರಿಂದ ಹರೀಶ್ ಪೂಂಜಾ ಪರ ಪ್ರಚಾರ

ಬೆಳ್ತಂಗಡಿ: ಚುನಾವಣಾ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಎಲ್ಲಾ ಪಕ್ಷಗಳ ಘಟಾನುಘಟಿ ನಾಯಕರು ಕರ್ನಾಟಕದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಹಿಂದುತ್ವದ ಭದ್ರಕೋಟೆ ಎನಿಸಿಕೊಂಡಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಹಿಂದುತ್ವದ ಬೆಂಕಿ ಚೆಂಡು ಖ್ಯಾತಿಯ ಯೋಗಿ ಆದಿತ್ಯನಾಥ್ ಮತ್ತು ಹಿಮಂತ ಬಿಸ್ವ ಸರ್ಮಾ ಬೃಹತ್ ರೋಡ್ ಶೋ ಗಳಲ್ಲಿ ಭಾಗವಹಿಸಲಿದ್ದಾರೆ.   ಇಂದು ಸಂಜೆ ಬೆಳ್ತಂಗಡಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರ್ಮಾ ಅವರ ರೋಡ್ ಶೋ ನಡೆಯಲಿದೆ. ಸಂಜೆ 4 ಗಂಟೆಗೆ ಉಜಿರೆ ಕಾಲೇಜು […]