ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಸಿಬಿಐಗೆ ವಹಿಸಿದ ಉತ್ತರ ಪ್ರದೇಶ ಸರ್ಕಾರ
ಲಖನೌ: ಹತ್ರಾಸ್ 19 ವರ್ಷದ ಯುವತಿಯ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಆದೇಶಿಸಿದರು. ಅತ್ಯಾಚಾರ ಪ್ರಕರಣ ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 19 ವರ್ಷದ ಯುವತಿ ಸೆಪ್ಟೆಂಬರ್ 29ರಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.