ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಕಾಲ ನಡೆದ ವಾದದಲ್ಲಿ ಅರ್ಜಿದಾರರ ಪರ 21 ವಕೀಲರು ಭಾಗಿಯಾಗಿದ್ದು, ಪ್ರತಿವಾದಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಕರ್ನಾಟಕ ಅಡ್ವೊಕೇಟ್ ಜನರಲ್ ಪ್ರಭುಲಿಂಗ […]
ಬಾಬರಿ ನಂತರ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ಮುಸ್ಲಿಮರು ತಯಾರಿಲ್ಲ: ಅಸಾದುದ್ದೀನ್ ಓವೈಸಿ
ವಾರಣಾಸಿ: ಬಾಬರಿ ಮಸೀದಿಯ ನಂತರ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ಮುಸ್ಲಿಮರು ತಯಾರಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ ಹೇಳಿದ್ದಾರೆ. ನ್ಯಾಯಾಲಯದ ಆದೇಶದನ್ವಯ ವಾರಣಾಸಿಯ ಜ್ಞಾನವಾಪಿ ಸಂಕೀರ್ಣದ ಸಮೀಕ್ಷೆಯ ಸಮಯದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಲಾಗಿರುವ ಬಳಿಕ ಅವರು ಪ್ರತಿಕ್ರಿಯಿಸಿದ್ದಾರೆ. ಬಾಬರಿ ಮಸೀದಿ ಧ್ವಂಸ ಮತ್ತು 1949 ರಲ್ಲಿ ಹಿಂದೂ ದೇವತೆಗಳ ವಿಗ್ರಹಗಳು ಕಾಣಿಸಿಕೊಂಡಾಗ ನಡೆದ ಘಟನೆಯನ್ನು ಉಲ್ಲೇಖಿಸಿದ ಓವೈಸಿ, ವಾರಣಾಸಿಯಲ್ಲಿ ಅದನ್ನು ಪುನರಾವರ್ತಿಸಲು ಬಿಡುವುದಿಲ್ಲ ಎಂದು ಮುಸ್ಲಿಮರು ಪ್ರತಿಜ್ಞೆ ಮಾಡಬೇಕೆಂದಿದ್ದಾರೆ. ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ […]
ಪೋಷಕರೆ ಖಾಸಗಿ ಪದವಿಪೂರ್ವ ಕಾಲೇಜುಗಳ ಮಾನ್ಯತೆ ಖಚಿತಪಡಿಕೊಳ್ಳಿ: ಪದವಿ ಪೂರ್ವ ಶಿಕ್ಷಣ ಇಲಾಖೆ
ಉಡುಪಿ: ರಾಜ್ಯದ ಉಚ್ಛ ನ್ಯಾಯಾಲಯದ ಆದೇಶದಂತೆ, ಜಿಲ್ಲೆಯಲ್ಲಿರುವ ಖಾಸಗಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದಂತೆ, ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಖಚಿತಪಡಿಸಿಕೊಂಡ ನಂತರವೇ ಪದವಿಪೂರ್ವ ತರಗತಿಗಳಿಗೆ ದಾಖಲಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.