ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನ: ಸ್ಪಷ್ಟೀಕರಣ ನೀಡಿದ ಚಿತ್ರತಂಡ

ಬೆಂಗಳೂರು: ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕ್ರತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಟ್ವೀಟ್ ಮಾಡಿದ್ದಾರೆ. ಹೆಡ್ ಬುಷ್ ಚಿತ್ರದ ನಟ […]