ಉಡುಪಿ ಹೆಡ್ ಕಾನ್ ಸ್ಟೇಬಲ್ ಆತ್ಮಹತ್ಯೆ ಪ್ರಕರಣ: ಎರಡು ಆಡಿಯೋ ಕ್ಲಿಪ್ ಬಹಿರಂಗ

ಉಡುಪಿ: ಎಸ್.ಎಸ್.ಎಲ್.ಸಿ ಪ್ರಶ್ನೆ ಪತ್ರಿಕೆ ಕೋಣೆಯ ಭದ್ರತಾ ಕರ್ತವ್ಯದಲ್ಲಿ ನಿರತರಾಗಿದ್ದಾಗಲೇ ತನ್ನ ಸೇವಾ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ ಸ್ಟೇಬಲ್ ರಾಜೇಶ್ ಕುಂದರ್ ಅವರ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರಾಜೇಶ್ ಕುಂದರ್ ತಮ್ಮ ಸಹೋದ್ಯೋಗಿಗಳ ಕಿರುಕುಳದ ವಿರುದ್ದ ದೂರು ನೀಡಿದ್ದಾರೆನ್ನಲಾಗುವ ಆಡಿಯೋ ಕ್ಲಿಪ್ ಗಳು ಪೋಲೀಸರ ವಶವಾಗಿದೆ. ಮೊದಲನೆ ಆಡಿಯೋದಲ್ಲಿ ಹಿಜಾಬ್ ಗಲಾಟೆ ಸಂದರ್ಭ ಗಂಗೊಳ್ಳಿ ಠಾಣೆಗೆ ಕ್ಷಿಪ್ರ ದಾಳಿ ಪಡೆ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ರಾಜೇಶ್ ಕೈಕೆಳಗೆ ಇಬ್ಬರು ಸಿಬ್ಬಂದಿ […]

ಹೆಡ್ ಕಾನ್ ಸ್ಟೇಬಲ್ ಆತ್ಮಹತ್ಯೆಗೆ ಎಸಿಪಿ ಮತ್ತು ಪಿಎಸ್ ಐ ಕಾರಣ? ಡೆತ್ ನೋಟಿನಲ್ಲಿ ನಾಲ್ವರ ಹೆಸರು ಬಹಿರಂಗ!

ಉಡುಪಿ: ಆದಿ ಉಡುಪಿ ಶಾಲೆಯಲ್ಲಿ ಹತ್ತನೇ ತರಗತಿ ಪ್ರಶ್ನೆ ಪತ್ರಿಕೆಗಳ ಕೊಠಡಿಯ ಕಾವಲು ಕಾಯುತ್ತಿದ್ದ ಮೀಸಲು ಪಡೆಯ ಹೆಡ್ ಕಾನ್ ಸ್ಟೇಬಲ್ ರಾಜೇಶ್ ಕುಂದರ್, ಗುರುವಾರ ತಡರಾತ್ರಿಯಂದು ತನ್ನದೇ ಸರ್ವಿಸ್ ರೈಫಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿದೆ. ಮೃತ ರಾಜೇಶ್ ಕುಂದರ್ ಬರೆದಿದ್ದಾರೆ ಎಂದೆನ್ನಲಾಗುವ ಡೆತ್ ನೋಟ್ ಒಂದು ಹೊರಬಂದಿದ್ದು, ಈತನ ಸಹೋದ್ಯೋಗಿ ಗಣೇಶ್ ಎಂಬುವವರಿಗೆ ಈ ಡೆತ್ ನೋಟ್ ಲಭ್ಯವಾಗಿದೆ. ಡೆತ್ ನೋಟ್‌ನಲ್ಲಿ ತನ್ನ ಸಾವಿಗೆ ಡಿಎಆರ್ ಎಸಿಪಿ ಉಮೇಶ್, ಅಶ್ಫಾಕ್ […]

ಉಡುಪಿ: ಕರ್ತವ್ಯಕ್ಕೆ ಮರಳಿದ ದಿನವೆ ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್‌ಸ್ಟೆಬಲ್

ಉಡುಪಿ: ಕರ್ತವ್ಯದ ವೇಳೆ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್‌ಸ್ಟೆಬಲ್ ರಾಜೇಶ್  ಕುಂದರ್ ಅಮಾನತುಗೊಂಡ ಬಳಿಕ ಮತ್ತೆ ಕೆಲಸಕ್ಕೆ ಸೇರಿದ್ದರು ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಎಸ್ ಟಿ ಸಿದ್ದಲಿಂಗಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೃತ ರಾಜೇಶ್ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದರು. ಇವರು ಆದಿ ಉಡುಪಿಯ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಸ್ಟೋರ್ ರೂಮಿನ ಹೊರಗೆ ರಾತ್ರಿ ಪಾಳಿಯ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ ಇತರ ಸಿಬ್ಬಂದಿಗಳು […]

ಉಡುಪಿ: ಕರ್ತವ್ಯ ನಿರತ ಮುಖ್ಯ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಉಡುಪಿ: ಕರ್ತವ್ಯ ನಿರತ ಮುಖ್ಯ ಪೇದೆಯೊಬ್ಬರು ತನ್ನ ಬಳಿಯಿದ್ದ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಮುಖ್ಯ ಪೇದೆ ರಾಜೇಶ್ ಕುಂದರ್ ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡ ವ್ಯಕ್ತಿ. ಇವರು ಆದಿ ಉಡುಪಿಯ ಶಾಲೆಯೊಂದರ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಕೊಠಡಿಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದರು. ಅವಳಿ-ಜವಳಿ ಮಕ್ಕಳ ತಂದೆಯಾಗಿರುವ ರಾಜೇಶ್ ಕುಂದರ್, ರಾತ್ರಿ ವೇಳೆಯಲ್ಲಿ ಹಣೆಯ ಭಾಗಕ್ಕೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು […]