ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ: ರಕ್ತದಾನದಿಂದ ಪ್ರಾಣಾಪಾಯದಲ್ಲಿರುವ ಇನ್ನೊಬ್ಬರ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್‌ನ ನಿರ್ದೇಶಕ ಟಿ. ರಂಗ ಪೈ ಹೇಳಿದರು. ಮಂಗಳವಾರ ನಗರದ ಮಣಿಪಾಲ ಎಂ.ಐ.ಟಿ ಕ್ಯಾಂಪಸ್‌ನ ಡಾ. ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಸಭಾಂಗಣದಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ […]

ಉಡುಪಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ಅ.19 ರಂದು ನೇರ ಸಂದರ್ಶನ

ಉಡುಪಿ: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ಹೆರಿಗೆ ತಜ್ಞರು -03 ಹುದ್ದೆ (ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ), ಜಿಲ್ಲಾ ಆಸ್ಪತ್ರೆಯಲ್ಲಿ ಪೆಥಾಲಾಜಿಸ್ಟ್-1 ಹುದ್ದೆ, ವೈದ್ಯಾಧಿಕಾರಿಗಳು-05 ಹುದ್ದೆ (ಕುಂದಾಪುರದ ಖಾರ್ವಿಕೇರಿ ಹಾಗೂ ಕಾರ್ಕಳದ ಮರೀನಾಪುರದ ನಮ್ಮ ಕ್ಲಿನಿಕ್, ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಉಡುಪಿಯ ಜಿಲ್ಲಾ ಆಸ್ಪತ್ರೆ), ಆಡಿಯೋಮೆಟ್ರಿಕ್ ಅಸಿಸ್ಟೆಂಟ್ -01 ಹುದ್ದೆ, ಯಂಗ್ ಹಿಯರಿಂಗ್ […]

ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ, ಉಡುಪಿ ಜಿಲ್ಲಾ ಘಟಕ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ಸೋಮವಾರ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯುಜಿ.ಎವಿ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮ […]

ಮಹಿಳೆಯರ ಆರೋಗ್ಯ ಸಮಸ್ಯೆಗಳಿಗೆ ಉಚಿತ ಚಿಕಿತ್ಸೆ ನೀಡುವ ಆಯುಷ್ಮತಿ ಕ್ಲಿನಿಕ್ ಕಾರ್ಯಾರಂಭ

ಉಡುಪಿ: ಮಹಿಳೆಯರು ತಮ್ಮ ಆರೋಗ್ಯದ ಸಮಸ್ಯೆಗಳ ಬಗ್ಗೆ ಸಕಾಲದಲ್ಲಿ ಸೂಕ್ತ ತಪಾಸಣೆ ಮಾಡಿಸಿಕೊಳ್ಳದಿದ್ದಲ್ಲಿ ಅದರಿಂದ ಆಕೆಯ ಆರೋಗ್ಯ ಮಾತ್ರವಲ್ಲದೇ, ಆಕೆಯ ಕುಟುಂಬ ಮತ್ತು ಸಮಾಜದ ಆರೋಗ್ಯದ ಮೇಲೆ ಸಹ ವ್ಯತಿರಿಕ್ತ ಪರಿಣಾಮ ಉಂಟಾಗಲಿದ್ದು, ಮಹಿಳೆಯರು ಸುಸ್ಥಿರ ಆರೋಗ್ಯವಂತರಾಗಿರಲು ಆಯುಷ್ಮತಿ ಕ್ಲಿನಿಕ್‌ಗಳು ಸಹಕಾರಿಯಾಗಲಿವೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಹೇಳಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಗೂ […]

ಜೆ.ಇ ಲಸಿಕೆ ಕುರಿತ ಮಾಹಿತಿಗಾಗಿ ಸಹಾಯವಾಣಿ ಪ್ರಾರಂಭ

ಉಡುಪಿ: ಜಿಲ್ಲೆಯಲ್ಲಿ ಡಿಸೆಂಬರ್ 5 ರಿಂದ 24 ರ ವರೆಗೆ ಜೆ.ಇ ಲಸಿಕಾ ಅಭಿಯಾನ ನಡೆಯಲಿದ್ದು, ಈ ಕುರಿತು ಮಕ್ಕಳ ಪೋಷಕರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ಒದಗಿಸುವ ಸಲುವಾಗಿ ಸಹಾಯವಾಣಿ ಸಂಖ್ಯೆ: 9449843213 ಅನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.