ಕೊಡವೂರು: ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಉಪಕೇಂದ್ರ ಉದ್ಘಾಟನೆ
ಕೊಡವೂರು: ಇಲ್ಲಿನ ಪರಿಸರದಲ್ಲಿ ಅನೇಕ ಬಡವರು ಮತ್ತು ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲು ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ಆದ್ದರಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹತ್ತಿರದಲ್ಲಿ ಉತ್ತಮವಾದ ಮತ್ತು ಉಚಿತ ಆರೋಗ್ಯ ಸೇವೆ ಪಡೆಯಬೇಕಾದರೆ ನಮ್ಮ ಪರಿಸರದಲ್ಲಿಯೇ ಆರೋಗ್ಯ ಕೇಂದ್ರ ಬೇಕು ಎಂದು ಹಲವಾರು ವರ್ಷಗಳ ಹೋರಾಟ ನಡೆಸಿದ ಬಳಿಕ ಇಂದು ನಮ್ಮ ವಾರ್ಡಿನಲ್ಲಿ ಸರ್ಕಾರಿ ಆರೋಗ್ಯ ಕೇಂದ್ರ ಉದ್ಘಾಟನೆಯಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಉತ್ತಮವಾದ ಸೇವೆಯೊಂದಿಗೆ ಪ್ರತಿಯೊಬ್ಬರಿಗೂ ಉಚಿತವಾಗಿ […]
ಕಳತ್ತೂರು: ಸಮಾಜ ಸೇವಕರಿಂದ ಆರೋಗ್ಯ ಕೇಂದ್ರಕ್ಕೆ ಕುಡಿಯುವ ನೀರಿನ ಟ್ಯಾಂಕ್ ಕೊಡುಗೆ
ಕಾಪು : ಸಮಾಜ ಸೇವಾ ಕ್ಷೇತ್ರದಲ್ಲಿ ರಾಷ್ಟೀಯ ಪ್ರಶಸ್ತಿ ಪುರಸ್ಕೃತರಾದ ಕಾಪು ಸಮಾಜ ಸೇವಾ ವೇದಿಕೆಯ ಅಧ್ಯಕ್ಷ ಮೊಹಮ್ಮದ್ ಫಾರೂಕ್, ಚಂದ್ರನಗರದ ಜನಸಂಪರ್ಕ ಜನಸೇವಾ ವೇದಿಕೆಯ ಅಧ್ಯಕ್ಷ ದಿವಾಕರ ಬಿ ಶೆಟ್ಟಿ ಕಳತ್ತೂರು, ಉಭಯ ವೇದಿಕೆ ಸಂಚಾಲರಾದ ದಿವಾಕರ ಡಿ. ಶೆಟ್ಟಿ ಕಳತ್ತೂರು ಇವರು ತಮ್ಮ ವೈಯಕ್ತಿಕ ನೆಲೆಯಲ್ಲಿ ಕಳತ್ತೂರಿನಲ್ಲಿರುವ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ಉಪ ಕೇಂದ್ರಕ್ಕೆ 1000 ಲೀಟರ್ ನ ಕುಡಿಯುವ ನೀರಿನ ಟ್ಯಾಂಕ್ ಅನ್ನು ಕೊಡುಗೆಯಾಗಿ ಹಸ್ತಾಂತರಿಸಿದರು. ಆರೋಗ್ಯ ಸುರಕ್ಷಾಧಿಕಾರಿ ಸುಧಾವತಿ […]