ಜೂನ್ 19 ರಂದು ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹೆರಿಗೆ ತಜ್ಞರು (ಹಿರಿಯ/ ಅನುಭವವುಳ್ಳ)-2 ಹುದ್ದೆ, ಮಕ್ಕಳ ತಜ್ಞರು, ಆಡಿಯೋಲಾಜಿಸ್ಟ್ ಹಾಗೂ ಇನ್ಸ್ಟ್ರಕ್ಟರ್-ಯಂಗ್ ಹಿಯರಿಂಗ್ ಇಮ್‌ಪೇರ್ಡ್ ಚಿಲ್ಡ್ರನ್ ತಲಾ -1 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಜೂನ್ 19 ರಂದು ಬೆಳಗ್ಗೆ 10.30 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಮೂಲ […]
ಹವಾಮಾನಾಧಾರಿತ ರೋಗಗಳ ನಿಯಂತ್ರಣಕ್ಕೆ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್
ಉಡುಪಿ: ಸಾಮಾನ್ಯವಾಗಿ ರೋಗ ರುಜಿನಗಳು ಹವಾಮಾನಕ್ಕೆ ಅನುಗುಣವಾಗಿ ಹರಡುತ್ತವೆ. ಇವುಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ವತಿಯಿಂದ ವರ್ಷದ ಮೊದಲನೇ ಮಾಸದಿಂದ ಕೊನೆಯ ಮಾಸದವರೆಗೆ ಮುನ್ನೆಚ್ಚರಿಕಾ ಕ್ರಮಗಳು ಸೇರಿದಂತೆ ಮತ್ತಿತರ ಕಾರ್ಯಗಳನ್ನು ಕೈಗೊಳ್ಳಲು ಯೋಜನೆಗಳನ್ನು ರೂಪಿಸಿ, ಅನುಷ್ಠಾನಕ್ಕೆ ತಂದಲ್ಲಿ ಸಮಾಜವು ಆರೋಗ್ಯಯುಕ್ತವಾಗಿ ಇರಲು ಸಾಧ್ಯ. ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಹರಡುವಿಕೆ, ಅವುಗಳ ಲಕ್ಷಣಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಆಗಿಂದಾಗ್ಗೆ ಅರಿವು ಮೂಡಿಸಿದ್ದಲ್ಲಿ ಮಾತ್ರ ಜನರು ರೋಗಮುಕ್ತರಾಗಿರಲು ಸಾಧ್ಯ. ಈ ಬಗ್ಗೆ ಆರೋಗ್ಯ ಇಲಾಖಾ ಅಧಿಕಾರಿಗಳು ಮತ್ತು […]
ಸರಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಯನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಪೂರೈಸುವಂತೆ ವೆರೋನಿಕಾ ಕರ್ನೆಲಿಯೋ ಒತ್ತಾಯ
ಉಡುಪಿ: ಸದಾ ಬೇಟಿ ಬಚಾವೊ ಬೇಟಿ ಪಡಾವೊ ಎನ್ನುವ ಬಿಜೆಪಿ ಸರಕಾರಕ್ಕೆ ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಶುಚಿ ಯೋಜನೆಯಡಿ ನೀಡಲಾಗುವ ಸ್ಯಾನಿಟರಿ ನ್ಯಾಪ್ಕಿನ್ ಪೊರೈಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ವಿಚಾರ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವತಿಯಿಂದ ಶುಚಿ ಯೋಜನೆಯಡಿ ನ್ಯಾಪ್ಕಿನ್ ಖರೀದಿಸಿ ವಿತರಿಸುವ ಜವಾಬ್ದಾರಿ ಹೊತ್ತಿದ್ದು, ಕಳೆದ ಒಂದೂವರೆ ವರ್ಷದಿಂದ ಪೂರೈಸದಿರುವುದು ಸರಕಾರದ ನಿರ್ಲಕ್ಷ್ಯತನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ದೇಶದ ಪ್ರಧಾನಿಯವರು ಮಾತೆತ್ತಿದ್ದರೆ […]
ನಿಷೇಧಿತ ಪ್ಲಾಸ್ಟಿಕ್ ಮಾರಾಟ: 75 ಕೆ.ಜಿ ವಶ; ದಂಡ ವಸೂಲಿ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ದೊಡ್ಡಣಗುಡ್ಡೆ ಬಳಿ ಅಂಗಡಿಗಳಿಗೆ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನ ವಾಹನದ ಮೇಲೆ ಬುಧವಾರದಂದು ನಗರಸಭೆ ಆರೋಗ್ಯ ಶಾಖೆಯ ಅಧಿಕಾರಿಗಳು ದಾಳಿ ನಡೆಸಿ, 75 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 5000 ರೂ. ದಂಡ ವಿಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನಿಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು. ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲಾಗುವುದು. ಪ್ಲಾಸ್ಟಿಕ್ […]
ಆಗಸ್ಟ್1-15 ರ ವರೆಗೆ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ
ಉಡುಪಿ: 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿಯಿಂದ ಸಂಭವಿಸುವ ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ 15 ರ ವರೆಗೆ ರಾಷ್ಟ್ರೀಯ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 69,881 ಮಕ್ಕಳಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇವರ ಮನೆಗಳಿಗೆ ತೆರಳಿ ಓ.ಆರ್.ಎಸ್ ಪ್ಯಾಕೆಟ್ ವಿತರಣೆ ಮಾಡುವ ಮೂಲಕ ಇವುಗಳ ಬಳಕೆಯ ಕುರಿತು ಮಾಹಿತಿ ನೀಡಲಿದ್ದಾರೆ. ಆರೋಗ್ಯ ಸಂಸ್ಥೆಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಓ.ಆರ್.ಎಸ್ […]