ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಕಡ್ಡಾಯ: ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ ಸೆಪ್ಟೆಂಬರ್, 22: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದರು. ಅವರು ಇಂದು ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಜನಪರ ಕಲ್ಯಾಣ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದೆ, ಇವುಗಳ ಬಗ್ಗೆ ಅವರುಗಳಿಗೆ ಅರಿವು ಮೂಡಿಸುವುದರೊಂದಿಗೆ ಅವರನ್ನು ಫಲಾನುಭವಿಗಳನ್ನಾಗಿಸಬೇಕು […]