ಕಾರ್ಕಳ: ಛಾಯಾಗ್ರಾಹಕ ದೀಪಕ್ ಶೆಟ್ಟಿ ಹೃದಯಾಘಾತದಿಂದ ನಿಧನ

ಕಾರ್ಕಳ : ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45) ಹೃದಯಾಘಾತದಿಂದ ಫೆ. 12ರಂದು ನಿಧನ ಹೊಂದಿದ್ದಾರೆ. ಕಡ್ತಲ ಗ್ರಾಮ ಕುಕ್ಕುಜೆಯಲ್ಲಿ ಗೃಹಪ್ರವೇಶದ ವಿಡಿಯೋಗ್ರಫಿ ಮಾಡುತ್ತಿದ್ದ ಸಂದರ್ಭ ಕುಸಿದು ಬಿದ್ದಿದ್ದು ತಕ್ಷಣವೇ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಈ ವೇಳೆಗಾಗಲೇ ದೀಪಕ್ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ರಾಷ್ಟ್ರವ್ಯಾಪಿ CPR ತಂತ್ರ ಕಲಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ಆರೋಗ್ಯ ಇಲಾಖೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಯುವ ಜನತೆ ಸೇರಿದಂತೆ ವಯಸ್ಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಷ್ಟ್ರವ್ಯಾಪಿ CPR ತಂತ್ರವನ್ನು ಕಲಿಸುವ ಅಭಿಯಾನವನ್ನು ಪ್ರಾರಂಭಿಸಿದೆ. ಕಾರ್ಡಿಯೋಪಲ್ಮನರಿ ಪುನರುಜ್ಜೀವನವನ್ನು CPR ಎಂದೂ ಕರೆಯುತ್ತಾರೆ. ಇದು ವ್ಯಕ್ತಿಯ ಹೃದಯ ಬಡಿತ ಅಥವಾ ಉಸಿರಾಟ ನಿಂತಾಗ ಮಾಡುವ ತುರ್ತು ಜೀವ ಉಳಿಸುವ ವಿಧಾನವಾಗಿದೆ. CPR ದೇಹದ ಪ್ರಮುಖ ಅಂಗಗಳಿಗೆ ರಕ್ತದ ಹರಿವು ಮತ್ತು ಆಮ್ಲಜನಕೀಕರಣವನ್ನು ನಿರ್ವಹಿಸಲು ಎದೆಯ ಸಂಕೋಚನ ಮತ್ತು ಕೃತಕ ಉಸಿರಾಟದ ಸಂಯೋಜನೆಯನ್ನು ಒಳಗೊಂಡಿರುತ್ತದೆ. ಡಿಸೆಂಬರ್ […]