ಸಂಗೀತ ಪ್ರದರ್ಶನ ನೀಡುತ್ತಲೇ ಪ್ರಾಣ ತ್ಯಜಿಸಿದ ಖ್ಯಾತ ಗಾಯಕ ಕೆ.ಕೆ
ಕೋಲ್ಕತ್ತಾ: ಗಾಯಕ-ಸಂಯೋಜಕ ಕೆಕೆ (ಕೃಷ್ಣಕುಮಾರ್ ಕುನ್ನತ್) ಮಂಗಳವಾರ ತಮ್ಮ 53 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಎರಡು ದಿನಗಳ ಸಂಗೀತ ಕಚೇರಿಗಾಗಿ ಕೋಲ್ಕತ್ತಾದಲ್ಲಿದ್ದರು. ಇಲ್ಲಿನ ನಜ್ರುಲ್ ಮಂಚದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮವೊಂದರಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದ ಕೆ.ಕೆ ಅವರನ್ನು ಸಿ ಎಂ ಆರ್ ಐ ಆಸ್ಪತ್ರೆಗೆ ಸಾಗಿಸಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಕರೆತರುವಾಗಲೆ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಅವರು ಶಂಕಿತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸಿಎಂಆರ್ಐ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ […]
ಮಲ್ಪೆ: ಚಲಿಸುತ್ತಿರುವ ಸ್ಕೂಟರ್ ನಲ್ಲೇ ಉಸಿರು ನಿಲ್ಲಿಸಿದ ಮೀನುಗಾರ
ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ ಮೀನುಗಾರನೋರ್ವ ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಮಲ್ಪೆ ಕಂಬಳತೋಟ ನಿವಾಸಿ 32 ವರ್ಷದ ಪ್ರತಾಪ್ ಮೃತಪಟ್ಟ ಮೀನುಗಾರ. ಇವರು ಇಂದು ಬೆಳಿಗ್ಗೆ ಮೀನುಗಾರಿಕೆ ಮುಗಿಸಿಕೊಂಡು ಅಕ್ಕನ ಮಗ ಕಿರಣ್ ಎಂಬಾತನ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪ್ರತಾಪ್ ದಿಢೀರ್ ಅಸ್ವಸ್ಥಗೊಂಡು ಕಿರಣ್ ಮೈಮೇಲೆ ಬಿದಿದ್ದರು. ತಕ್ಷಣವೇ ಕಲ್ಯಾಣಪುರ ಗೊರಾಠಿ ಅಸ್ಪತ್ರೆಗೆ ಕರೆದುಕೊಂಡು […]
ಥೈಲ್ಯಾಂಡ್ ನಲ್ಲಿ ಹೃದಯಾಘಾತ: ಕುಂದಾಪುರದ ಯುವಕ ಸಾವು
ಕುಂದಾಪುರ: ಕೋಟೇಶ್ವರ ಸಮೀಪದ ಗೋಪಾಡಿ ಗ್ರಾಮ ಪಂಚಾಯಿತಿ ನಿವಾಸಿ ಕಿರಣ್ ಬೆರೆಟ್ಟೋ (35) ಸೋಮವಾರ ಹೃದಯಾಘಾದಿಂದ ಥೈಲ್ಯಾಂಡ್ ನಲ್ಲಿ ಮೃತಪಟ್ಟಿದ್ದಾರೆ. ನಿವೃತ್ತ ಶಿಕ್ಷಕ ಜೇಮ್ಸ್ ಬೆರೆಟ್ಟೋ ಪುತ್ರ ಕಿರಣ್ ಥೈಲ್ಯಾಂಡ್ ನಲ್ಲಿ ಟೂಲ್ ಡಿಸೈನ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕಾರಿನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ. ಕಿರಣ್ ಇತ್ತೀಚೆಗೆ ವಿವಾಹವಾಗಿದ್ದು, ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದ ತಮ್ಮ ಹುಟ್ಟ ಹಬ್ಬಕ್ಕೆ ಊರಿಗೆ ಬಂದು ಹಿಂದುರಿಗಿದ್ದರು. ಮೃತ ಕಿರಣ್ ಅಂತ್ಯಕ್ರಿಯೆ ಬುಧವಾರ ನಡೆಯಲಿದೆ.