ಕೆ.ಎಂ.ಸಿ ವೈದ್ಯರ ಸಾಧನೆ: ತೆರೆದ ಹೃದಯ ಶಸ್ತ್ರಚಿಕಿತ್ಸೆಯಿಲ್ಲದೆ ಯಶಸ್ವಿ ಹೃದಯ ಕವಾಟ ಬದಲಾವಣೆ 

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದ್ರೋಗ ವಿಭಾಗದ ಪ್ರಾಧ್ಯಾಪಕ ಡಾ.ಟಾಮ್ ದೇವಾಸಿಯಾ, ಸಹಾಯಕ ಪ್ರಾಧ್ಯಾಪಕಿ ಡಾ.ಮೋನಿಕಾ ಜೆ ಮತ್ತು ಹೃದಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ಗುರುಪ್ರಸಾದ್ ರೈ ಅವರ ತಂಡವು ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಇಲ್ಲದೆ ಮಹಾಪಧಮನಿಯ ಕವಾಟವನ್ನು ಯಶಸ್ವಿಯಾಗಿ ಬದಲಾಯಿಸುವುದರ ಮೂಲಕ ರೋಗಿಗಳಿಗೆ ಮರು ಜನ್ಮ ನೀಡಿದೆ. ಟ್ರಾನ್ಸ್‌ಕ್ಯಾಥೆಟರ್ ಎರೋಟಿಕ್ ವಾಲ್ವ್ ಇಂಪ್ಲಾಂಟೇಷನ್ (TAVI) ನಂತರ ಕೆಲವೇ ದಿನಗಳಲ್ಲಿ ರೋಗಿಗಳನ್ನು ಸ್ಥಿರ ಸ್ಥಿತಿಯಲ್ಲಿಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ […]