ಕರಾವಳಿಯಾದ್ಯಂತ ಆಗಸ್ಟ್ 8ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ: ರೆಡ್ ಅಲರ್ಟ್ ಘೋಷಣೆ
ಬೆಂಗಳೂರು: ಕರಾವಳಿಯಾದ್ಯಂತ ಆಗಸ್ಟ್ 8ರ ವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಆ. 8ರ ವರೆಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.