ರಾಜ್ಯದಲ್ಲಿ 3 ದಿನ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ
ಬೆಂಗಳೂರು: ರಾಜ್ಯಕ್ಕೆದಲ್ಲಿ ಮಂಗಳವಾರ ಅಥವಾ ಬುಧವಾರ ಮುಂಗಾರು ಪ್ರವೇಶಿಸಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ. 3 ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆ: ಮುಂಗಾರು ಪ್ರವೇಶಿಸುವ ಹಿನ್ನೆಲೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದ್ದು, ನಾಳೆ ರಾಜ್ಯದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಪ್ರವೇಶಿಸಿ, ಭಾರೀ ಮಳೆಯಾಗುವ ನಿರೀಕ್ಷೆ ಇವೆ ಎಂದು ತಿಳಿಸಿದ್ದಾರೆ.