ಮುಂದಿನ ಮೂರು- ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು-ನಾಲ್ಕು ದಿನ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರ ನೀಡಿದೆ. ಸಮುದ್ರ ಮಟ್ಟದಿಂದ 900 ಮೀಟರ್‌ ಎತ್ತರದಲ್ಲಿ ಟ್ರಫ್‌ ಇರುವುದರಿಂದ ಹವಾಮಾನದಲ್ಲಿ ಭಾರೀ ಬದಲಾವಣೆ ಆಗಲಿದೆ ಎಂದಿದೆ. ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ವಿವಿಧ ಕಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ನೀಡಿದೆ.