ಭಾರೀ ಮಳೆ: ಕೃಷ್ಣಮಠದ ಪಾರ್ಕಿಂಗ್ ಸ್ಥಳದ ಆಸುಪಾಸಿನ ಪ್ರದೇಶಗಳು ಸಂಪೂರ್ಣ ಮುಳುಗಡೆ

ಉಡುಪಿ: ಕಳೆದ 2-3 ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಕೃಷ್ಣಮಠದ ಪಾರ್ಕಿಂಗ್ ಸ್ಥಳದ ಆಸುಪಾಸಿನ ಪ್ರದೇಶಗಳಾದ ಬೈಲಕರೆ ಹಾಗೂ ಕಲ್ಸಂಕ ಹತ್ತಿರದ ಮನೆಗಳು ನೀರಿನಲ್ಲಿ ಸಂಪೂರ್ಣ ಮುಳುಗಡೆಯಾಗಿದ್ದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ನೇತೃತ್ವದಲ್ಲಿ ಸಹಾಯಕ ಅಗ್ನಿಶಾಮಕ ದಳದ ಅಧಿಕಾರಿ ಮೀರ್ ಮೊಹ್ಮದ್ ಗೌಸ್ ಹಾಗೂ ಸಿಬ್ಬಂದಿಗಳ ಸಹಾಯದಿಂದ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಕುಂಜಿಬೆಟ್ಟು ನಗರಸಭಾ ಸದಸ್ಯ ಗಿರೀಶ್ ಅಂಚನ್, ಮಾಜಿ ನಗರಸಭಾ […]

ಬೆಂಗಳೂರು: ಭಾರೀ ಮಳೆಗೆ ಕುಸಿದ ಕಟ್ಟಡ; ಪ್ರಾಣಾಪಾಯವಿಲ್ಲ

ಕರ್ನಾಟಕ: ಭಾರೀ ಮಳೆಗೆ ಬೆಂಗಳೂರಿನ ವಿದ್ಯಾರಾಯನಪುರದಲ್ಲಿ ಹಳೆ ಕಟ್ಟಡ ಒಂದು ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ನಗರದ ಹಲವೆಡೆ ನೀರು ತುಂಬಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಹಲವೆಡೆ ಮರಗಳು ಉರುಳಿದ್ದು, ಕೆ.ಆರ್ ಸರ್ಕಲ್ ಪ್ರದೇಶದಲ್ಲಿ ನೀರು ತುಂಬಿ ಜನರು ಅಂಡರ್ ಪಾಸ್ ಬಳಿ ಪರದಾಡುವಂತಾಗಿದ್ದು, ಬಳಿಕ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು. ಈ ಬಾರಿ ಮುಂಗಾರು ಮಳೆಯು ಜೂನ್ 4 ರಂದು ಕೇರಳ ಪ್ರವೇಶಲಿದೆ ಎಂದು ಭಾರತೀಯ […]

ಆಗಸ್ಟ್ 2 ರಿಂದ 6 ರವರೆಗೆ ಗುಡುಗು ಸಿಡಿಲಿನ ಸಹಿತ ಅಧಿಕದಿಂದ ಅತ್ಯಾಧಿಕ ಮಳೆಯ ಮುನ್ಸೂಚನೆ

ಉಡುಪಿ/ಮಂಗಳೂರು: ಕರ್ನಾಟಕ ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು ಸಿಡಿಲಿನ ಅಬ್ಬರದ ಸಹಿತ ಅತ್ಯಾಧಿಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 3 ರಿಂದ 6 ರವರೆಗೆ 115.6 ಮಿಮಿ ನಿಂದ 204.4 ಮಿಮಿ ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಸಮುದ್ರವೂ ಪ್ರಕ್ಷುಬ್ದವಾಗಲಿರುವ ಹಿನ್ನೆಯಲ್ಲಿ ಮೀನುಗಾರರು ನೀರಿಗೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿಯಲ್ಲಿ ಮತ್ತೆ ಅತ್ಯಾಧಿಕ ಮಳೆಯ ಮುನ್ಸೂಚನೆ: ಪ್ರಕ್ಷುಬ್ದ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ

ಉಡುಪಿ: ಮುಂದಿನ 24 ಗಂಟೆಗಳಲ್ಲಿ ಮತ್ತು ನಂತರದ ನಾಲ್ಕು ದಿನಗಳವರೆಗೆ ಕರ್ನಾಟಕ ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 16 ರಂದು 115.6 ಮಿಮೀ ನಿಂದ 204.4 ಮಿಮೀ ವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಜುಲೈ 17 ರಿಂದ 20ರ ವರೆಗೆ ಕರಾವಳಿ ಭಾಗದಲ್ಲಿ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ. ಕಾರವಾರದಿಂದ ಮಂಗಳೂರಿನವರೆಗಿನ ಸಮುದ್ರವೂ ಪ್ರಕ್ಷುಬ್ದವಾಗಲಿದ್ದು, 3.5 ರಿಂದ 4.6 ಮೀಟರ್ ಎತ್ತರದ ಅಲೆಗಳು ಕಾಣಿಸಿಕೊಳ್ಳಲಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. […]

ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜುಲೈ 11 ರಂದು ಶಾಲೆಗಳಿಗೆ ರಜೆ

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯ ಮೇರೆಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 11 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ.