ವಿಕೋಪಗಳಿಂದ ತೊಂದರೆಗೊಳಗಾದವರು ತುರ್ತು ಪರಿಹಾರಕ್ಕಾಗಿ ಉಚಿತ ಸಹಾಯವಾಣಿಗೆ ಕರೆ ಮಾಡಿ: ಜಿಲ್ಲಾಧಿಕಾರಿ

ನೆರೆ ಹಾಗೂ ಪ್ರಾಕೃತಿಕ ವಿಕೋಪಗಳಿಂದ ತೊಂದರೆಗೊಳಗಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077, ಮೆಸ್ಕಾಂ ಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಸಹಾಯವಾಣಿ ಸಂಖ್ಯೆ 1912 ಮತ್ತು ರಕ್ಷಣೆಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ 112 ಕ್ಕೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.    

ಭಾರೀ ಮಳೆ: ಅಗತ್ಯವಿರುವೆಡೆ ಶಾಲೆಗಳಿಗೆ ರಜೆ ಸಾರಲು ಉಡುಪಿ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿದ್ದರೂ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ. ಆದರೆ ಅಗತ್ಯ ಇರುವಲ್ಲಿ ಆಯಾ ಶಾಲಾ ಹಂತದಲ್ಲೇ ರಜೆ ಸಾರಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ. ಕರಾವಳಿಯಲ್ಲಿ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಧಿಕಾರಿ ಈ ಸೂಚನೆ ನೀಡಿದ್ದಾರೆ.