ಕರಾವಳಿಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂದ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. 3 ದಿನಗಳ ಹಿಂದೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಮಳೆಯಾಗಿತ್ತು. ಮುಂದಿನ ಮೂರು ದಿನ ಮಳೆಯ ವಾತಾವರಣ ಮುಂದುವರೆಯಲಿದ್ದು, ಮಲೆನಾಡು, ಕೊಡಗು, ಹಾಸನದಲ್ಲಿ ಹಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.