ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಿಡಿಲು ಸಹಿತ ಭಾರಿ ಮಳೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ಸಂಜೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಉಡುಪಿ ನಗರದಲ್ಲಿ ಮಧ್ಯಾಹ್ನದ ಹೊತ್ತಿಗೆ ಮೋಡ ಕವಿದಿದ್ದು, ಮಧ್ಯಾಹ್ನ 3 ಗಂಟೆಗೆ ವೇಳೆಗೆ ಗುಡುಗು ಸಹಿತ ಮಳೆ ಸುರಿದಿದೆ. ಉಡುಪಿ, ಕಟಪಾಡಿ, ಕಾಪು, ಪಡುಬಿದ್ರಿ, ಕುಂದಾಪುರದ ಮಡಾಮಕ್ಕಿ, ಆರ್ಡಿ, ಶೇಡಿಮನೆ, ಅಲ್ವಾಡಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಕಾರ್ಕಳ, ಹಿರಿಯಡಕ, ಪೆರ್ಡೂರು, ಹೆಬ್ರಿಯ ಹಲವಡೆ ಗುಡುಗು, ಸಿಡಿಲು, ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಕೆಲವು ಭಾಗಗಳಲ್ಲಿ ಗಾಳಿಯ ಹೊಡೆತಕ್ಕೆ ಮರಗಳು ಧರೆಗುರುಳಿದೆ. ಧಿಡೀರ್ ಸುರಿದ […]