ಕರಾವಳಿಯಾದ್ಯಂತ ಸೆ.5ರ ವರೆಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 5ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.