ಕೇರಳದಲ್ಲಿ ಭಾರೀ ಮಳೆ, ಭೂಕುಸಿತ: 18 ಸಾವು, ಹಲವರು ನಾಪತ್ತೆ
ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ. ದಕ್ಷಿಣ ಮತ್ತು ಕೇಂದ್ರ ಭಾಗದಲ್ಲಿ ಭಾರಿ ಮಳೆ ಮತ್ತು ಭೂಕುಸಿತ ಸಂಭವಿಸಿದ ಪರಿಣಾಮ 18 ಜನರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪಟ್ಟಣಂತಿಟ್ಟ, ಕೋಟಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಮಳೆ ಸುರಿಯುತ್ತಿರುವ ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಪಾಲಕ್ಕಾಡು, ಮಲಪ್ಪುರಂ, ಕೋಯಿಕೋಡ್ ಮತ್ತು ವಯನಾಡು ಜಿಲ್ಲೆಗಳಲ್ಲೂ […]