ದೆಹಲಿಯಲ್ಲಿ ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ
ದೇಶದ ಹಲವು ಭಾಗಗಳಲ್ಲಿ ಬೇಸಿಗೆ ಮಳೆ ಸುರಿದಿದ್ದು, ಹಲವಾರು ಸಮಸ್ಯೆಗಳು ಎದುರಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ರೈಲು ಹಾಗೂ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ರಾತ್ರಿಯಿಡೀ ಸುರಿದ ಮಳೆಗೆ ದೆಹಲಿ ನಡುಗಿದ್ದು, 15 ಕ್ಕೂ ಹೆಚ್ಚು ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ. ದೆಹಲಿಗೆ ಬರುವ ರೈಲುಗಳು ತಡವಾಗಿ ಬರುವ ಬಗ್ಗೆ ರೈಲ್ವೆ ಇಲಾಖೆ ಪ್ರಕಟಣೆ ನೀಡಿದೆ. ದೆಹಲಿಯ ಹಲವು ಪ್ರದೇಶದಲ್ಲಿ ಹೆಚ್ಚು ಮಳೆಯಾಗಿದ್ದು, ರಾತ್ರಿ ಸುರಿದ ಮಳೆಗೆ ಬೆಳಗ್ಗೆ […]