ವರುಣನ ಅಬ್ಬರಕ್ಕೆ ತತ್ತರಿಸಿದ ದಕ್ಷಿಣ ಕನ್ನಡ ಜಿಲ್ಲೆ; ಮನೆ ಮಠ ಕಳೆದುಕೊಂಡು ಅಸ್ತವ್ಯಸ್ತವಾಯಿತು ಜನಜೀವನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆ ಫಟ್ಟ ಪ್ರದೇಶದ ತಪ್ಪಲಿನಲ್ಲಿರುವ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು, ಬಾಳುಗೋಡು, ಹರಿಹರಪಳ್ಳತ್ತಡ್ಕ ಮೊದಲಾದ ಭಾಗದಲ್ಲಿ ಹಲವು ಅನಾಹುತಗಳಿಗೆ ಕಾರಣವಾಗಿದೆ. ಕಲ್ಮಕಾರು, ಕಡಮಕಲ್ಲು ಮೊದಲಾದ ಬೆಟ್ಟಗಳಲ್ಲಿ ಉಂಟಾದ ಮೇಘಸ್ಪೋಟದಿಂದಾಗಿ ಈ ಭಾಗದ ಹೆಚ್ಚಿನ ಸೇತುವೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಮನೆ ಮೇಲೆ ಗುಡ್ಡ ಜರಿದು ಇಬ್ಬರು ಮಕ್ಕಳು ಮೃತಪಟ್ಟಿದ್ದು, ಲಕ್ಷಾಂತರ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ. ಇಲ್ಲಿನ ನಾಗಕ್ಷೇತ್ರ […]
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ಕಟ್ಟೆಚ್ಚರ ವಹಿಸಲು ದ.ಕ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು/ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಸಂಭಾವ್ಯ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸಲು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲ ಮಕ್ಕಳ ಬಗ್ಗೆ ನಿಗಾ ವಹಿಸಿವಂತೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ನೀಡಿದ್ದಾರೆ. ಶಾಲೆಗೆ ಹಾಜರಾಗಲು ತೊಂದರೆಯಾಗುವಂತಹ ಪ್ರದೇಶಗಳಲ್ಲಿ ರಜೆ ಘೋಷಣೆ ಮಾಡಲಾಗಿದ್ದು, ಹಾಜರಾಗಿರುವ ವಿದ್ಯಾರ್ಥಿಗಳಿಗೆ ಪಾಠ ಮುಂದುವರಿಸಲು ಸೂಚಿಸಲಾಗಿದೆ.