ತೌಕ್ತೆ ಚಂಡಮಾರುತ ಎಫೆಕ್ಟ್: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ತೀವ್ರಗೊಂಡ ಕಡಲ್ಕೊರೆತ

ಉಡುಪಿ: ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ತೌಕ್ತೆ ಚಂಡಮಾರುತ ಪರಿಣಾಮ ಉಡುಪಿ ಜಿಲ್ಲೆಯಾದ್ಯಂತ ಇಂದು ಧಾರಾಕಾರವಾಗಿ ಮಳೆ ಸುರಿದಿದೆ. ಉಡುಪಿ, ಕಾರ್ಕಳ, ಕುಂದಾಪುರ, ಬೈಂದೂರು ಹಾಗೂ ಕಾಪು ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಇಂದು ಮುಂಜಾನೆ ಮೂರು ಗಂಟೆಗೆ ಶುರುವಾದ ಗಾಳಿಮಳೆ ಕೆಲಕಾಲ ಜೋರಾಗಿ ಸುರಿದಿದೆ. ಬೆಳಿಗ್ಗೆ ಕೊಂಚ ಬಿಡುವುಕೊಟ್ಟಿದ್ದ ಮಳೆ, 11 ಗಂಟೆಯ ಬಳಿಕ ಧಾರಾಕಾರವಾಗಿ ಸುರಿದಿದೆ. ಕುಂದಾಪುರ, ಬೈಂದೂರು ಹಾಗೂ ಕಾಪು ತಾಲೂಕಿನಲ್ಲಿ ಸಮುದ್ರದಲೆಗಳ ಅಬ್ಬರಕ್ಕೆ ಕಡಲ್ಕೊರೆತ ಉಂಟಾಗಿದೆ. ಸಮುದ್ರದಲ್ಲಿ ಭಾರೀ ಗಾಳಿ ಬೀಸುತ್ತಿದ್ದು, […]