ಉತ್ತರಾಖಂಡದಲ್ಲಿ ಭಾರಿ ಹಿಮಸ್ಫೋಟ: 150ಕ್ಕೂ ಹೆಚ್ಚು ಮಂದಿ ಕಣ್ಮರೆ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಹಿಮಸ್ಫೋಟ ಸಂಭವಿಸಿದ್ದು, ಏಕಾಏಕಿಯಾಗಿ ಹಿಮಪ್ರವಾಹ ಉಂಟಾದ ಪರಿಣಾಮ 150ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಪ್ರವಾಹದಿಂದ ಧೌಲಿಗಂಗಾ ನದಿಯಲ್ಲಿನ ಹಿಮದ ನೀರಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ನೈಸರ್ಗಿಕ ವಿಕೋಪ ಕೇಂದ್ರ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರವಾಹದ ಕುರಿತು ಹೈ ಅಲರ್ಟ್ ಘೋಷಣೆ ಮಾಡಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ರೈಣಿ ಗ್ರಾಮದಲ್ಲಿ ಹಿಮಸ್ಫೋಟಗೊಂಡಿದ್ದು, ಹರಿದ್ವಾರ ಮತ್ತು ರಿಷಿಕೇಶ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಹುಟ್ಟಿಸಿದೆ. 150 ಮಂದಿ ನಾಪತ್ತೆ ರೈಣಿ ಗ್ರಾಮದ ಬಳಿ […]