ಹೆಬ್ರಿ: ಕೂಲಿಕಾರ್ಮಿಕನ ಮೇಲೆ ಕರಡಿ ದಾಳಿ

ಕಾರ್ಕಳ: ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ಮಾಡಿದ ಘಟನೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ಮತ್ತಾವು ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮತ್ತಾವು ರಾಮಕೃಷ್ಣ ಗೌಡ (39) ಎಂಬವರು ಕರಡಿ ದಾಳಿಗೊಳಗಾದ ವ್ಯಕ್ತಿ. ಕರಡಿ ದಾಳಿಯಿಂದ ರಾಮಕೃಷ್ಣರ ಕಾಲು, ಪಾದಕ್ಕೆ ಗಂಭೀರ ಗಾಯವಾಗಿದೆ. ಅವರನ್ನು ಕೂಡಲೇ ಹೆಬ್ರಿ ರಾಘವೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.