ಹೆಬ್ರಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗುಡುಗಿದ ಸುನಿಲ್ ಕುಮಾರ್
ಕಾರ್ಕಳ: ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಟಿಕೆಟ್ ಬಯಸಿ ಸಿಗದಿದ್ದಾಗ ಅಂದು ಗೋಪಾಲ ಭಂಡಾರಿ ಬದುಕಿದ್ದಾಗಲೆ ಸಾರ್ವಜನಿಕವಾಗಿ ಅವರ ಶವಯಾತ್ರೆ ನಡೆಸಿದ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿಗೆ ಈಗ ನಾಲ್ಕು ವರ್ಷದ ಬಳಿಕ ಭಂಡಾರಿಯವರ ನೆನಪಾಗಿದೆ, ಪುತ್ಥಳಿ ನಿರ್ಮಿಸುವುದಕ್ಕೆ ಜ್ಞಾನೋದಯವಾಗಿದೆ. ತಾವು ಮೊದಲು ತಮ್ಮ ಬದ್ಧತೆ ಏನೆಂಬುದನ್ನು ಸ್ಪಷ್ಟಪಡಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಸವಾಲು ಹಾಕಿದ್ದಾರೆ. ಹೆಬ್ರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಟಿಕೆಟ್ ಸಿಗದಿದ್ದಾಗ ಜೀವಂತವಿದ್ದ ವ್ಯಕ್ತಿಯನ್ನೇ ಶವಯಾತ್ರೆ […]