ಹೆಬ್ರಿ: ಕಾಲೇಜು ಜಾಗದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣ ವಿರೋಧಿಸಿ ಹೋರಾಟಕ್ಕೆ ಸಿದ್ದತೆ
ಉಡುಪಿ: ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಜಾಗವನ್ನು ಬಲಿಕೊಡುವ ಷಡ್ಯಂತ್ರ ನಡೆಯುತ್ತಿದ್ದು, ಇದರ ವಿರುದ್ಧ ವಿದ್ಯಾರ್ಥಿ ಸಂಘಟನೆ ಹಾಗೂ ಕಾಲೇಜು ಉಳಿಸಿ ಹೋರಾಟ ಸಮಿತಿ ಹೋರಾಟಕ್ಕೆ ಮುಂದಾಗಿದೆ ಎಂದು ಕಾಲೇಜು ಉಳಿಸಿ ಹೋರಾಟ ಸಮಿತಿ ಮುಖಂಡ ಶ್ರೀಧರ್ ಶೆಟ್ಟಿ, ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹೆಬ್ರಿ ಕಾಲೇಜು ಆವರಣದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸಾಕಷ್ಟು ವಿರೋಧವಿದೆ. ಈ ಬಗ್ಗೆ ಶಾಸಕರಿಗೆ, ಜಿಲ್ಲಾಡಳಿತಕ್ಕೆ ಮನವಿಕೊಟ್ಟು ವಾಸ್ತವತೆಯ ಬಗ್ಗೆ ಮನವರಿಕೆ ಮಾಡಲಾಗಿದೆ. ಆದರೆ ಯಾವುದೇ ಪೂರಕ […]