ಹೆಬ್ರಿ: ಬೈಕ್ ಡಿಕ್ಕಿ ಹೊಡೆದು ಜಿಂಕೆ ಮೃತ್ಯು; ಸವಾರ ಗಂಭೀರ
ಹೆಬ್ರಿ: ಬೈಕ್ ಡಿಕ್ಕಿ ಹೊಡೆದು ಜಿಂಕೆಯೊಂದು ಮೃತಪಟ್ಟ ಘಟನೆ ಹೆಬ್ರಿಯ ರಾಷ್ಟ್ರೀಯ ಹೆದ್ದಾರಿ 169ರ ಕನ್ಯಾನ ಎಂಬಲ್ಲಿ ಬುಧವಾರ ನಡೆದಿದೆ. ಖಾಸಗಿ ಬಸ್ ಚಾಲಕ ಹರೀಶ್ ಎಂಬವರು ಇಂದು ಬೆಳಿಗ್ಗೆ 6.45ರ ಸುಮಾರಿಗೆ ಈ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಏಕಾಏಕಿಯಾಗಿ ರಸ್ತೆಗೆ ಜಿಂಕೆಯೊಂದು ಅಡ್ಡ ಬಂದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಜಿಂಕೆ ಸ್ಥಳದಲ್ಲೇ ಮೃತಪಟ್ಟಿದ್ದು, ಹರೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೆಬ್ರಿ ವಲಯ ಅರಣ್ಯಾಧಿಕಾರಿ […]