ಹೆಬ್ರಿ: ಸ್ವಾತಂತ್ರ್ಯವನ್ನು ಉಳಿಸುವ, ಮುಂದಿನ ಪೀಳಿಗೆಗೆ ತಲುಪಿಸುವ, ಗುರುತರವಾದ ಜವಾಬ್ದಾರಿ ನಮ್ಮದು: ಎಚ್. ನಾಗರಾಜ್ ಶೆಟ್ಟಿ

ಹೆಬ್ರಿ: ನಾವು ಸ್ವಾತಂತ್ರ್ಯ ಪಡೆಯಲು ನಮ್ಮ ಹಿರಿಯರು ಮಾಡಿದಂತಹ ತ್ಯಾಗ, ಬಲಿದಾನಗಳನ್ನು ಇಂದಿನ ಯುವ ಪೀಳಿಗೆ ನೆನಪಿನಲ್ಲಿಟ್ಟುಕೊಳ್ಳಬೇಕು. ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು ಉಳಿಸುವ, ಮುಂದಿನ ಪೀಳಿಗೆಗೆ ತಲುಪಿಸುವ, ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾವು ಪಡೆದ ಸ್ವಾತಂತ್ರ್ಯದ ಮೌಲ್ಯವನ್ನು ನಮ್ಮ ಬದುಕಿನಲ್ಲಿ ಅಳವಡಿಸಿ, ಸೇವಾ ಮನೋಭಾವವನ್ನು ಇಟ್ಟುಕೊಂಡು ಜೀವನ ನಡೆಸಬೇಕು. ಸಮಾಜದಲ್ಲಿ ಉತ್ತಮ ಶಿಕ್ಷಕರಾಗಿ, ವಕೀಲರಾಗಿ, ವೈದ್ಯರಾಗಿ ಹೀಗೆ ಬೇರೆ ಬೇರೆ ಕ್ಷೇತ್ರದಲ್ಲಿ ನಮ್ಮನ್ನು ತೊಡಗಿಸಿಕೊಂಡು ಸಮಾಜಕ್ಕೆ ಕೊಡುಗೆಯನ್ನು ನೀಡಬೇಕು ಎಂದು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ […]