ಹೆಬ್ರಿ: ಉಪನ್ಯಾಸಕ ನೇಣಿಗೆ ಶರಣು
ಹೆಬ್ರಿ: ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯ ಬಡಗುಡ್ಡೆ ಎಂಬಲ್ಲಿ ನಡೆದಿದೆ. ಮೂಡುಬಿದಿರೆಯ ಖಾಸಗಿ ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡವರು. ವೆಂಕಟೇಶ್ ಪತ್ನಿಯೊಂದಿಗೆ ಹೆಬ್ರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತ್ನಿ ಕೂಡ ಹೆಬ್ರಿಯ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದರು. ಇವರಿಬ್ಬರು ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಈ ವಿಷಯ ಇಬ್ಬರ ಮನೆಯವರಿಗೂ ತಿಳಿದಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ, ಲಾಕ್ ಡೌನ್ ನಿಂದಾಗಿ ಕೆಲಸ ವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು […]