ಹೆಬ್ರಿ-ಪರ್ಕಳ ಹೆದ್ದಾರಿಗಾಗಿ ಸಾಂಪ್ರದಾಯಿಕ ಮರಗಳ ಹನನ: ಪರಿಸರ ಪ್ರೇಮಿಗಳಿಂದ ಆಕ್ಷೇಪಣೆ

ಉಡುಪಿ: ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಮರಗಳನ್ನು ತೆರವುಗೊಳಿಸುವ ಪ್ರಕ್ರಿಯೆಗೆ ಪರಿಸರ ಪ್ರೇಮಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಪಶ್ಚಿಮ ಘಟ್ಟಗಳಂತಹ ಸೂಕ್ಷ್ಮ ಪ್ರದೇಶದ ಜೀವ ವೈವಿಧ್ಯಕ್ಕೆ ಮಾರಕವಾಗುತ್ತಿರುವ ಅಭಿವೃದ್ದಿ ಕಾರ್ಯಗಳ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಪಶ್ಚಿಮ ಘಟ್ಟಗಳ ಹಸುರು ನುಂಗಲು ಹೊರಟಿದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೆಬ್ರಿಯಿಂದ ಪರ್ಕಳದ ವರೆಗೆ ಚತುಷ್ಪಥ ಹೆದ್ದಾರಿಯ ಹೆಸರಿನಲ್ಲಿ ಸಾವಿರಾರು ಬಲಿತ ಪಾರಂಪರಿಕ ಮರಗಳನ್ನು ಕಡಿಯಲು ಮುಂದಾಗಿದೆ. ಮರ ಕಡಿತಲೆಗೆ ಸಂಬಂಧಿಸಿದ ಕಾನೂನು ನಿಯಮಗಳನ್ನು ಮೀರಿ ತನ್ನ ಲಾಭದ […]

ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿಗಾಗಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಉಡುಪಿ ನಗರಸಭಾ ವ್ಯಾಪ್ತಿಯ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗೆ ಕಾಮಗಾರಿಗೆ ಅಡಚಣೆಯಾಗುವ 205 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿ.27 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ವಲಯ ಕಚೇರಿಯ ಸಭಾಂಗಣದಲ್ಲಿ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆಯಿಂದ ತಾಣದಮನೆವರೆಗೆ ಇರುವ ಒಟ್ಟು 1549 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿ. 31 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು […]

ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಗಳ ತೆರವು: ಡಿಸೆಂಬರ್ 22 ರಂದು ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಕಾಮಗಾರಿಗೆ ಅಡಚಣೆಯಾಗುವ ಹೆಬ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಳಪೇಟೆಯಿಂದ ಕೊಳಗುಡ್ಡೆವರೆಗೆ ಒಟ್ಟು 862 ಮರಗಳನ್ನು ಹಾಗೂ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಗುಡ್ಡೆಯಿಂದ ಮುಳ್ಳುಗುಡ್ಡೆವರೆಗೆ ಒಟ್ಟು 580 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 22 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ […]