ಹೆಬ್ರಿ ಎಸ್.ಆರ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಸಂಘ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ.

ಹೆಬ್ರಿ: ವಿದ್ಯಾರ್ಥಿಗಳಾದ ನಿಮ್ಮಲ್ಲಿ ನಿಮ್ಮ ಅಧ್ಯಯನ ನಿಮ್ಮ ಕಲಿಕೆ ನಿಮ್ಮನ್ನು ಬೇರೆಬೇರೆ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತದೆ. ನೀವು ಯಾವುದೇ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಲು ಸಾಹಿತ್ಯ ಪೂರಕವಾಗಿದೆ ಎಂದು ಹೆಬ್ರಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ಭಂಡಾರಿ ಹೇಳಿದರು. ಇವರು, ಎಸ್.ಆರ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಂಘ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ನಾವು ನಮ್ಮ ಜೀವನದಲ್ಲಿ ಆದರ್ಶ ವ್ಯಕ್ತಿಗಳನ್ನು ಮಾದರಿಯಾಗಿಸಿಕೊಂಡು ನಮ್ಮ ಜೀವನದಲ್ಲಿ ಉನ್ನತ ಮಟ್ಟಕ್ಕೆ […]