ನಿಮ್ಮ ನೆರವಿಗೆ ದೇವರಂತೆ ಬರುತ್ತಾರೆ ಕೊರೊನಾ ಸೈನಿಕರು: ಉಡುಪಿ ಜಿಲ್ಲೆಯಲ್ಲಿ ಸೇವೆ ನೀಡಲು ರೆಡಿಯಾದ್ರು ಈ ಆಪತ್ಬಾಂಧವರು!
ಬ್ರಹ್ಮಾವರದಲ್ಲಿನ ಮನೆಯಲ್ಲಿ ಇಬ್ಬರೇ ಇರುವ ವೃಧ್ದ ದಂಪತಿ, ಲಾಕ್ ಡೌನ್ ಕಾರಣ ಅಂಗಡಿಗಳು ಕ್ಲೋಸ್, ಮನೆಯಿಂದ ಹೊರ ಹೋಗುವ ಹಾಗಿಲ್ಲ, ಗಂಡನಿಗೆ ಸಕ್ಕರೆ ಕಾಯಿಲೆ ಜೊತೆಗೆ ಹೃದಯ ಸಂಬಂದಿ ಸಮಸ್ಯೆ, ದಂಪತಿಗೆ ಬ್ರೆಡ್ ಮತ್ತು ರಸ್ಕ್ ಅವಶ್ಯಕತೆಯಿದೆ, ಈ ಬಗ್ಗೆ ಸಮಸ್ಯೆ ಕೋರಿದ ದಂಪತಿಗೆ 20 ನಿಮಿಷದಲ್ಲಿ ಬ್ರೆಡ್ ಮತ್ತು ರಸ್ಕ್ ನೊಂದಿಗೆ ಅವರು ಕೋರಿದ ಇತರೆ ಅಗತ್ಯ ವಸ್ತುಗಳು ಯುವತಿಯೊಬ್ಬರಿಂದ ಪೂರೈಕೆಯಾಗುತ್ತದೆ. ಕಾರ್ಕಳದ ಗ್ರಾಮೀಣ ಪ್ರದೇಶದಲ್ಲಿನ ರೋಗಿಗೆ ಅಗತ್ಯ ಔಷಧಿಗಳು ತುರ್ತಾಗಿ ಬೇಕಿದೆ, ಆ ಔಷದಗಳು […]