ಎಸ್.ಎಸ್.ಎಲ್.ಸಿ ಪರೀಕ್ಷೆ: ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಆರಂಭ
ಉಡುಪಿ ಜೂನ್ 9: ಎಸ್.ಎಸ್.ಎಲ್.ಸಿ ಪರೀಕ್ಷೆಯು ಜೂನ್ 25 ರಿಂದ ನಡೆಯಲಿದ್ದು, ಮಕ್ಕಳು ಮತ್ತು ಪೋಷಕರು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು, ಉಡುಪಿ ಜಿಲ್ಲೆಯಲ್ಲಿ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಸರಕಾರಿ ರಜಾದಿನ ಹೊರತುಪಡಿಸಿ ಪ್ರತೀ ದಿನ ಕಚೇರಿ ಸಮಯದಲ್ಲಿ ಪರೀಕ್ಷೆಗೆ ಸಂಬಂದಿಸಿದಂತೆ ಯಾವುದೇ ಸಂದೇಹಗಳಿದ್ದಲ್ಲಿ ಈ ಸಹಾಯವಾಣಿಯ ಮೂಲಕ ನೋಡೆಲ್ ಅಧಿಕಾರಿ, ಕಚೇರಿಯನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳುವಂತೆ ಡಿಡಿಪಿಯ ಉಡುಪಿ ಅವರ ಪ್ರಕಟಣೆ ತಿಳಿಸಿದೆ. ಸಹಾಯವಾಣಿ ಸಂಖ್ಯೆಗಳು: ಉಪ ನಿದೇಶಕರ ಕಚೇರಿ ಉಡುಪಿ […]