ಹೆಮ್ಮಾಡಿ: ಆ. 26 ರಂದು ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಸಭೆ

ಹೆಮ್ಮಾಡಿ: ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ (ನಿ.) 2022-2023 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಆ. 26 ಶನಿವಾರ ಬೆಳಗ್ಗೆ 10.30ಕ್ಕೆ ಸರಿಯಾಗಿ ಹೆಮ್ಮಾಡಿಯ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ರಿ., ಇದರ ಸಭಾಭವನದಲ್ಲಿ ಜರುಗಲಿರುವುದು. ಸಂಘದ ಸದಸ್ಯರೆಲ್ಲರೂ ಸಕಾಲದಲ್ಲಿ ಹಾಜರಾಗಿ ಸಭೆಯ ಕಾರ್ಯಕಲಾಪದಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆ ತಿಳಿಸಿದೆ.  

ಜೆಇಇ ಮೈನ್ಸ್: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಸಾಧನೆ

ಹೆಮ್ಮಾಡಿ: ರಾಷ್ಟ್ರ ಮಟ್ಟದಲ್ಲಿ ನಡೆಯುವ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆಯುಷ್ ಭೌತಶಾಸ್ತ್ರದಲ್ಲಿ 97 ಪರ್ಸಂಟೈಲ್ ಪಡೆದು ಒಟ್ಟು96 ಪರ್ಸಂಟೈಲ್ ಪಡೆದಿರುತ್ತಾನೆ ಹಾಗೂ ಸುಮಂತ್ ರಸಾಯನಶಾಸ್ತ್ರದಲ್ಲಿ 99.12 ಪರ್ಸಂಟೈಲ್ ಪಡೆಯುವುದರ ಜೊತೆಗೆ ಒಟ್ಟು 96 ಪರ್ಸಂಟೈಲ್ ಪಡೆದಿರುತ್ತಾನೆ. ಹಾಗೆಯೇ ಓಂಕಾರ್ ಪ್ರಭು ಒಟ್ಟು 90.04 ಪರ್ಸಂಟೈಲ್, ಹರ್ಷಿತ್ ಖಾರ್ವಿ 88.17 ಪರ್ಸಂಟೈಲ್, ತನಿಷಾ 83.5 ಪರ್ಸಂಟೈಲ್ ಪಡೆದಿರುತ್ತಾರೆ. ಪರೀಕ್ಷೆಗೆ ಕುಳಿತ ಕಾಲೇಜಿನ […]

ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ: ಐಶ್ವರ್ಯ ಖಾರ್ವಿ 591 ಅಂಕಗಳೊಂದಿಗೆ ರಾಜ್ಯ ಮಟ್ಟದಲ್ಲಿ 6ನೇ ರ್‍ಯಾಂಕ್

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು […]

ಪ್ರಥಮ ವರ್ಷದಲ್ಲೇ 100% ಫಲಿತಾಂಶ ದಾಖಲಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪ.ಪೂ ಕಾಲೇಜು

ಕುಂದಾಪುರ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪ.ಪೂ ಕಾಲೇಜು 100% ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯಕ್ಕೆ 6 ನೇ ಸ್ಥಾನ ಪಡೆದಿದ್ದಾಳೆ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. […]

ಹೆಮ್ಮಾಡಿ: ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ದಶಮಾನೋತ್ಸವ, ಅಂಪಾರು ಶಾಖೆ ಉದ್ಘಾಟನೆ

ಕುಂದಾಪುರ: ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ದಶಮಾನೋತ್ಸವ ಸಂಭ್ರಮ ಹಾಗೂ ಅಂಪಾರಿನ ಪ್ರಶಾಂತ್ ಕಾಂಪ್ಲೆಕ್ಸ್ ನಲ್ಲಿ ಆರಂಭಗೊಂಡ ಅಂಪಾರು ಶಾಖೆಯ ಉದ್ಘಾಟನೆ ಸೋಮವಾರ ನಡೆಯಿತು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಶಾಖೆಯನ್ನು ಉದ್ಘಾಟಿಸಿ ಶುಭಹಾರೈಸಿ ಮಾತನಾಡಿ, ಯಾವುದೇ ಸಹಕಾರಿ ಸಂಸ್ಥೆ ಯಶಸ್ವಿಯಾಗಿ ಮುನ್ನಡೆಯಲು ಗ್ರಾಹಕರ ಸಹಕಾರ ಬಹಳ ಮುಖ್ಯ. ಸಿಬ್ಬಂದಿ ಮತ್ತು ಗ್ರಾಹಕರ ಉತ್ತಮ ಬಾಂಧವ್ಯದಿಂದ ಸಂಘವು ಒಳ್ಳೆಯ ರೀತಿಯಲ್ಲಿ ಮುನ್ನಡೆಯಲು ಸಾಧ್ಯ ಎಂದರು. ಭದ್ರತಾ ಕೋಶವನ್ನು ಉದ್ಘಾಟಿಸಿದ […]