ಲೋಕಸಭಾ ಚುನಾವಣೆ- ಅನುಮತಿಯಿಲ್ಲದೇ ಜಾಹೀರಾತು ಪ್ರಸಾರಕ್ಕೆ ಅವಕಾಶವಿಲ್ಲ: ಡಿಸಿ
ಉಡುಪಿ: ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲೆಯ ಯಾವುದೇ ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ಕುರಿತಾದ ಜಾಹೀರಾತುಗಳನ್ನು ಸ್ಥಳಿಯ ಕೇಬಲ್ ವಾಹಿನಿಗಳಲ್ಲಿ ಪ್ರಸಾರ ಮಾಡುವ ಮುನ್ನ ಕಡ್ಡಾಯವಾಗಿ ಎಂಸಿಎಂಸಿ ಸಮಿತಿಯ ಅನುಮತಿ ಅಗತ್ಯವಿದ್ದು, ಇದನ್ನು ಉಲ್ಲಂಘಿಸುವ ಚಾನೆಲ್ ಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಶನಿವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ಥಳಿಯ ಕೇಬಲ್ ವಾಹಿನಿಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣೆಯಲ್ಲಿ […]
ಚುನಾವಣೆ: ರಾಜಕೀಯ ಸಭೆಗಳ ಸಂಪೂರ್ಣ ವೀಡಿಯೋ ಚಿತ್ರೀಕರಣ- ಡಿಸಿ ಸೂಚನೆ
ಉಡುಪಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ನಡೆಯುವ ಎಲ್ಲಾ ಸಭೆ ಸಮಾರಂಭಗಳನ್ನು ಸಂಪೂರ್ಣ ವೀಡಿಯೋ ಚಿತ್ರೀಕರಣ ನಡೆಸಿ, ಕಟ್ಟುನಿಟ್ಟಿನ ನಿಗಾ ಇಡುವಂತೆ ಜಿಲ್ಲಾಧಿಕಾರಿ ಹೆಫ್ಸಿಭಾ ರಾಣಿ ಕೊರ್ಲಪತಿ ಸೂಚಿಸಿದ್ದಾರೆ. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ವಿವಿಧ ನೋಡಲ್ ಅಧಿಕಾರಿಗಳ ಮತ್ತು ವಿವಿಧ ಸಮಿತಿಗಳ ಸಭೆಯಲ್ಲಿ ಮಾತನಾಡಿದರು. ಚುನಾವಣೆಗೆ ಸಂಬಂಧಪಟ್ಟ ಯಾವುದೇ ಸಭೆ ಸಮಾರಂಭಗಳಿಗೂ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು. ಚುನಾವಣಾ ಸಭೆ ಆರಂಭವಾಗುವುದಕ್ಕಿಂತಲೂ ಒಂದು ಗಂಟೆ ಮುಂಚೆಯೇ ಸಂಬಂಧಪಟ್ಟ ಅಧಿಕಾರಿಗಳು […]
ನೂತನ ಜಿಲ್ಲಾಧಿಕಾರಿ ‘ಹೆಪ್ಸಿಬಾ ರಾಣಿ’ ಅಧಿಕಾರ ಸ್ವೀಕಾರ
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಹೆಪ್ಸಿಬಾ ರಾಣಿ ಕೊರ್ಲಪತಿ ಇಂದು ಅಧಿಕಾರ ಸ್ವೀಕರಿಸಿದರು. ಹಿಂದಿನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ನೂತನ ಜಿಲ್ಲಾಧಿಕಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.