ಇಂದು ಮಧ್ಯಾಹ್ನ 2.15ಕ್ಕೆ ನೂತನ ಸಚಿವರ ಪ್ರಮಾಣ ವಚನ: ಕರೆ ಹೋಗಿರುವ ಶಾಸಕರ ಪಟ್ಟಿ ಇಲ್ಲಿದೆ
ಬೆಂಗಳೂರು: ನೂತನ ಸಚಿವರ ಪಟ್ಟಿ ಬೆಳಿಗ್ಗೆ 11ರಿಂದ 11.30ರ ಮಧ್ಯೆ ರಾಜಭವನದಿಂದ ಅಧಿಕೃತವಾಗಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬುಧವಾರ ಬೆಳಿಗ್ಗೆ ದೆಹಲಿಯಿಂದ ಮರಳಿದ ಬೊಮ್ಮಾಯಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. ರಾಜಭವನನದ ಗಾಜಿನ ಮನೆಯಲ್ಲಿ ಮಧ್ಯಾಹ್ನ 2.15ಕ್ಕೆ ಪ್ರಮಾಣ ವಚನ ನಡೆಯಲಿದೆ ಎಂದೂ ಅವರು ಹೇಳಿದರು. ಎರಡು ವಿಷಯ ಬಾಕಿ ಇದೆ: ಸಂಪುಟಕ್ಕೆ ಯಾರನ್ನೆಲ್ಲ ಸೇರಿಸಬೇಕೆಂಬ ಬಗ್ಗೆ ವರಿಷ್ಠರು ಎರಡು ದಿನ ಚರ್ಚೆ ಮಾಡಿದ್ದಾರೆ. ಎರಡು ವಿಷಯಗಳ […]