ಪುಟಾಣಿಗಳ ಯಕ್ಷಗಾನದ ಮೇಲೂ ರಾಜಕೀಯದ ಕರಿ ನೆರಳು: ಪ್ರದರ್ಶನ ಅರ್ಧದಲ್ಲೇ ಮೊಟಕು; ಸಾರ್ವಜನಿಕರಿಂದ ಆಕ್ರೋಶ
ಹೇರಿಕುದ್ರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಯಕ್ಷ ಹಬ್ಬ ಹೇರಿಕುದ್ರು-2023 ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನವನ್ನು ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯು ಅಯೋಜಿಸಿದ್ದು, ಪುಟಾಣಿಗಳು ಯಕ್ಷಗಾನ ಪ್ರದರ್ಶನದಲ್ಲಿ ನಿರತರಾಗಿದ್ದಾಗ ಪ್ರದರ್ಶನವನ್ನು ಮಧ್ಯದಲ್ಲಿಯೇ ನಿಲ್ಲಿಸಿದ ಪ್ರಸಂಗ ನಡೆದಿದ್ದು ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಪ್ರಕರಣದ ವಿಡಿಯೋ ವೈರಲ್ ಆಗಿದೆ. ಆನಗಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ ಪೂಜಾರಿ ಕುಂದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಪೊಲೀಸರು ಮಕ್ಕಳ ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ಈ ಬಗ್ಗೆ […]